ಬಂಗಾಳ ಕೊಲ್ಲಿಯಲ್ಲಿ ಪ್ರಬಲ‌ ವಾಯುಭಾರ ಕುಸಿತ| ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.

Ad Widget ... ..

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Ad Widget

ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *