ಸಮಗ್ರ ನ್ಯೂಸ್: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿದೆ.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 05-11-2023 ರ ಬೆಳಿಗ್ಗೆ 11.00 ರಿಂದ 22-01-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ
ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ,ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು
ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಾರೋ, ಅಂತಹ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ದಾಖಲಿಸುವ ಶಾಲೆಗಳನ್ನು ಮಾತ್ರ ಹಂಚಿಕೆಗೆ ಪರಿಗಣಿಸಲಾಗುವುದು, ಅಭ್ಯರ್ಥಿಗಳು ತಮ್ಮ ಸೀಟು ಹಂಚಿಕೆ ಅವಕಾಶವನ್ನು ಹೆಚ್ಚಿಸಿಕೊಳ್ಳಲು ತಮ್ಮ ಜಿಲ್ಲೆಯಲ್ಲಿರುವ KREIS ನ ಎಲ್ಲಾ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ನಮೂದಿಸತಕ್ಕದ್ದು. ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಮೆರಿಟ್, ಮೀಸಲಾತಿ ಹಾಗೂ ಅಭ್ಯರ್ಥಿಗಳು ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ Computerised Auto Selection ಮೂಲಕ ಸೀಟು ಹಂಚಿಕೆಯನ್ನು ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ.