ಚುನಾವಣಾ ಹಿನ್ನೆಲೆಯಲ್ಲಿ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್| ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಜಲಶಕ್ತಿ‌ ಆಯೋಗ ಅನುಮತಿ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ವರ್ಷಗಳ ಬೇಡಿಕೆಯಾದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನೆಗೆ ಕೇಂದ್ರ ಜಲಶಕ್ತಿ ಆಯೋಗ ಅನುಮತಿ ನೀಡಿದೆ.
ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದು, ಕಳಸಾ-ಬಂಡೂರಿ ನಾಲಾ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.ಇದು ಉತ್ತರ ಕರ್ನಾಟಕ ಜನತೆಗೆ ಪ್ರಧಾನಿ ಮೋದಿ ಕೊಡುಗೆ ಎಂದಿದ್ದಾರೆ.

Ad Widget ... ..

ಉತ್ತರ ಕರ್ನಾಟಕ ಭಾಗದ ಮಹತ್ವದ ಯೋಜನೆಯಾಗಿದ್ದ ಕಳಸಾ ಬಂಡೂರಿ ಯೋಜನೆಗಾಗಿ 2002ರಿಂದ ಕಳಸಾದಿಂದ ಡೈವರ್ಟ್ ಮಾಡಲು ಚರ್ಚಿಸಲಾಗಿತ್ತು. ಆದರೆ ಗೋವಾ ಸರ್ಕಾರ ಯೋಜನೆಗೆ ತಗಾದೆ ತೆಗೆದಿತ್ತು. ಈಗ ಕಳಸಾ-ಬಂಡೂರಿ ಯೋಜನೆಯ ಡಿಪಿಆರ್ ಗೆ ಪ್ರಧಾನಿ ಮೋದಿಯವರು ಒಪ್ಪಿದ್ದಾರೆ. ಪ್ರಮುಖವಾಗಿ ಅಂತರಾಜ್ಯ ವಿವಾದ ವಿಚಾರದಲ್ಲಿಯು ರಾಜ್ಯದ ನಿಲುವು ಸೂಕ್ತವಾಗಿದೆ ಎಂದು ಹೇಳಿದ್ದಾರೆ ಎಂದರು.

Ad Widget

ವಿಧಾನಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಕೂಡಲೇ ಕಾಮಗಾರಿ ಕೈಗೊಳ್ಳಲು ಕ್ರಮಕೈಗೊಳ್ಳುತ್ತೇವೆ. ನಾವೇ ಅಡಿಗಲ್ಲು ಹಾಕಿ ದೊಡ್ಡ ಕಾರ್ಯಕ್ರಮ ಮಾಡಿ ಈ ಭಾಗದ ಜನರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡುತ್ತೇವೆ, ಕೂಡಲೇ ಡಿಪಿಆರ್ ಸಿದ್ಧಪಡಿಸಿ ಕಾರ್ಯಯೋಜನೆ ಆರಂಭಿಸುತ್ತೇವೆ. ನಾವೇ ಅಡಿಗಲ್ಲು ಹಾಕಿ ಪೂಜೆ ನೆರವೇರಿಸುತ್ತೇವೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *