Ad Widget .

ಪುತ್ತೂರು: ಅಡಿಕೆಗೆ ಭವಿಷ್ಯವಿಲ್ಲ ಎಂದ ಗೃಹಸಚಿವರ ವಿರುದ್ಧ ಪ್ರತಿಭಟನೆಗೆ ಸಿದ್ಧತೆ

ಸಮಗ್ರ ನ್ಯೂಸ್: ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂದ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸಿ ಜ.2 ರಂದು ಅಡಿಕೆ ಬೆಳೆಗಾರರನ್ನು ಸೇರಿಸಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ್ ರೈ ಹೇಳಿದರು.

Ad Widget . Ad Widget .

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಡಿಕೆ ಬೆಳೆ ಇತ್ತೀಚಿನ ದಿನಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲೆ ಚುಕ್ಕಿರೋಗ,ಕೊಳೆರೋಗ,ಹಳದಿ ರೋಗದಿಂದ ಅಡಿಕೆ ಗಿಡಗಳು ನಾಶವಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯ ಬಿಜೆಪಿ ಸರಕಾರ ಅಡಿಕೆ ಬೆಳೆಗಾರರ ಸ್ಥೈರ್ಯ ಕುಗ್ಗಿಸುವಂತಹ ಕೆಲಸ ಮಾಡುತ್ತಿದೆ.

Ad Widget . Ad Widget .

ಆಂದ್ರಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇದೀಗ ಅಡಿಕೆ ಬೆಳೆಯನ್ನು ಬೆಳೆಸಲಾಗುತ್ತಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಮಸ್ಯೆಯಾಗಲಿ ಎಂದು ಗೃಹ ಸಚಿವರು ಹೇಳಿದ್ದಾರೆ. ಆದರೆ ಬರ್ಮಾ ಮತ್ತು ಇತರ ದೇಶಗಳಿಂದ ದೇಶದೊಳಗೆ ಅಕ್ರಮವಾಗಿ ಅಡಿಕೆಯ ಆಮದಾಗುತ್ತಿದೆ.

ಇದನ್ನು ತಡೆಗಟ್ಟುವ ಕೆಲಸವನ್ನು ಕೇಂದ್ರದ ಬಿಜೆಪಿ ಸರಕಾರ ಮಾಡಬೇಕಿದೆ. ಅದನ್ನು ಬಿಟ್ಟು ಅಡಿಕೆಗೆ ಭವಿಷ್ಯವೇ ಇಲ್ಲ ಎನ್ನುವ ಮೂಲಕ ಅಡಿಕೆ ಬೆಳೆಯನ್ನೇ ನಿಶೇಧಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು. ಗೃಹ ಸಚಿವರ ಈ ಹೇಳಿಕೆಯನ್ನು ಖಂಡಿಸಿ ಜ.2 ರಂದು ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಕಾಂಗ್ರೆಸ್ ಕಿಸಾನ್ ಘಟಕದ ನೇತೃತ್ವದಲ್ಲಿ ಪ್ರತಿಭಟನೆಯನ್ನೂ ನಡೆಸಲಾಗುವುದು ಎಂದು ಅವರು ಹೇಳಿದರು.

Leave a Comment

Your email address will not be published. Required fields are marked *