ಬಸ್ ಟಾಪ್ ಮೇಲೆ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget ... ..

ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28 ರಂದು ಶಬರಿಮಲೆ ಯಾತ್ರೆ ಮುಗಿಸಿ ಬಂದು ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ನಿಲ್ಲಿಸಿದ ಬಸ್ಸಿನ ಟಾಪ್ ನಲ್ಲಿ ಮಲಗಿದ್ದರು. ಮೇಲಿಂದ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದು ತಲೆಗೆ ತೀವ್ರ ಗಾಯಗೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಡಿ.30ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *