December 2022

ಚರ್ಚ್ ಗೆ ನುಗ್ಗಿ ಬಾಲಯೇಸು ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು| ದೂರು ದಾಖಲು

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್‌ಗೆ ಅಪರಿಚಿತರು ನುಗ್ಗಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು ತೆರಳಿದ್ದರು. ಸಂಜೆ ೬ ಗಂಟೆ ವೇಳೆ ಪ್ರಾರ್ಥನೆಗೆ ಬಂದ ಫಾದರ್ ಜಾನ್‌ಪಾಲ್ ಚರ್ಚಿನ ಬಾಗಿಲು ಮುರಿದು, ಬಾಲ ಯೇಸು ಪ್ರತಿಮೆ ಭಗ್ನಗೊಂಡಿರುವುದು, ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನು ದೋಚಿರುವುದು […]

ಚರ್ಚ್ ಗೆ ನುಗ್ಗಿ ಬಾಲಯೇಸು ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು| ದೂರು ದಾಖಲು Read More »

8 ತಿಂಗಳ ಕಾಲ ತಿರುಪತಿ ದೇಗುಲ ಬಂದ್| ತಿಮ್ಮಪ್ಪನ ಮೂಲಮೂರ್ತಿ ದರ್ಶನ ಅನುಮಾನ!

ಸಮಗ್ರ ನ್ಯೂಸ್: ಗರ್ಭಗುಡಿ ಮೇಲಿನ ಗೋಪುರದ ಚಿನ್ನದ ಲೇಪನ ಕಾರ್ಯ ಕೈಗೊಳ್ಳುವುದರಿಂದ ಎಂಟು ತಿಂಗಳ ಕಾಲ ತಿರುಪತಿ ತಿರುಮಲದಲ್ಲಿ ತಿಮ್ಮಪ್ಪನ ದರ್ಶನ ಬಂದ್ ಆಗಲಿದೆ. ತಾತ್ಕಾಲಿಕವಾಗಿ ಗರ್ಭಗುಡಿ ನಿರ್ಮಿಸಿ ಭಕ್ತರಿಗೆ ದರ್ಶನ ಕಲ್ಪಿಸಲು ಚಿಂತನೆ ನಡೆದಿದೆ. ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಾರ್ಷಿಕ ಒಂದು ಕೋಟಿಗೂ ಅಧಿಕ ಭಕ್ತರು ಬರುತ್ತಾರೆ. ಗರ್ಭಗುಡಿಯನ್ನು ಕನಿಷ್ಠ ಆರರಿಂದ ಎಂಟು ತಿಂಗಳ ಕಾಲ ಮುಚ್ಚುವ ಸಾಧ್ಯತೆ ಇದ್ದು, ಗರ್ಭಗುಡಿಯ ಮೇಲೆ ಮೂರು ಅಂತಸ್ತಿನ ಆನಂದ ನಿಲಯಂ ಹೆಸರಿನ 37.8

8 ತಿಂಗಳ ಕಾಲ ತಿರುಪತಿ ದೇಗುಲ ಬಂದ್| ತಿಮ್ಮಪ್ಪನ ಮೂಲಮೂರ್ತಿ ದರ್ಶನ ಅನುಮಾನ! Read More »

ಹಾವೇರಿಯಲ್ಲಿ ಭೀಕರ ಅಪಘಾತ| ಕಾಸರಗೋಡು ಮೂಲದ ಇಬ್ಬರು ಸ್ಪಾಟೌಟ್

ಸಮಗ್ರ ನ್ಯೂಸ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ (62) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಕಾರಿನಲ್ಲಿ ಸಿಲುಕಿದವರನ್ನು ಹೊರತೆಗೆದು ಆಸ್ಪತ್ರೆಗೆ

ಹಾವೇರಿಯಲ್ಲಿ ಭೀಕರ ಅಪಘಾತ| ಕಾಸರಗೋಡು ಮೂಲದ ಇಬ್ಬರು ಸ್ಪಾಟೌಟ್ Read More »

ಚಾಲಕನ ಅಜಾಗ್ರತೆಗೆ ಅಮಾಯಕ ಬಾಲಕ ಬಲಿ| ಮಂಗಳೂರು ಹೊರವಲಯದಲ್ಲಿ ದಾರುಣ ಘಟನೆ

ಸಮಗ್ರ ನ್ಯೂಸ್: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹೊರವಲಯದ ಮುಡಿಪು ಕಾಲೇಜು ಬಳಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತ ಬಾಲಕನನ್ನು ಪಜೀರ್ ನಿವಾಸಿ ಕಾರ್ತಿಕ್ (12) ಎನ್ನಲಾಗಿದೆ. ಕಾರ್ತಿಕ್ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿ ಬಸ್ಸು ಕಾಯುತ್ತಿದ್ದ ವೇಳೆ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆಯಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಬಳಿಕ

ಚಾಲಕನ ಅಜಾಗ್ರತೆಗೆ ಅಮಾಯಕ ಬಾಲಕ ಬಲಿ| ಮಂಗಳೂರು ಹೊರವಲಯದಲ್ಲಿ ದಾರುಣ ಘಟನೆ Read More »

ಮೈಸೂರು: ಮೋದಿ ಸಹೋದರನ ಕಾರು ಅಪಘಾತ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ. ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ

ಮೈಸೂರು: ಮೋದಿ ಸಹೋದರನ ಕಾರು ಅಪಘಾತ Read More »

ಶಿವಮೊಗ್ಗದಲ್ಲಿ ರೋಹಿತ್ ಚಕ್ರತೀರ್ಥಗೆ ‘ಗೋ ಬ್ಯಾಕ್’ ಬಿಸಿ!!

ಸಮಗ್ರ ನ್ಯೂಸ್: ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿದ, ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ ಎಂದು ಶಿವಮೊಗದಲ್ಲಿ ವಿವಿಧ ಸಂಘಟನೆಗಳಿಂದ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ಆಗಮಿಸುವ ಮುನ್ನವೇ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ರಾಷ್ಟ್ರ,

ಶಿವಮೊಗ್ಗದಲ್ಲಿ ರೋಹಿತ್ ಚಕ್ರತೀರ್ಥಗೆ ‘ಗೋ ಬ್ಯಾಕ್’ ಬಿಸಿ!! Read More »

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್

ಸಮಗ್ರ ನ್ಯೂಸ್: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನ ರೆಡ್ಡಿ ಬೆಂಬಲಿಗರಾದ ದಮ್ಮೂರು ಶೇಖರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಲವು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಪಕ್ಷ ಕಟ್ಟುವಲ್ಲಿ ನನ್ನ ಅಳಿಲು ಸೇವೆ ಸಲ್ಲಿಸಿದ್ದೇನೆ. ಇಷ್ಟು ವರ್ಷ ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ. ಇತ್ತೀಚೆಗೆ ಜನಾರ್ದನ ರೆಡ್ಡಿ ಅವರು

ಜನಾರ್ಧನ ರೆಡ್ಡಿ ಬಳಿಕ ಬಳ್ಳಾರಿಯಲ್ಲಿ ರಾಜೀನಾಮೆ ಪರ್ವ ಶುರು| ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಶೇಖರ್ ದಮ್ಮೂರು ರಿಸೈನ್ Read More »

ಕೊರಿಯರ್ ಅಂಗಡಿಯಲ್ಲಿ ಬ್ಲಾಸ್ಟ್ ಪ್ರಕರಣ| ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್

ಸಮಗ್ರ ನ್ಯೂಸ್: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನಾ ಸ್ಥಳದತ್ತ ಯಾರೂ ಪ್ರವೇಶ ಮಾಡದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ. ಸ್ಥಳಕ್ಕೆ ಆಂತರಿಕ ಭದ್ರತಾ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಿಕ್ಸಿ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಫೋಟದ ರಭಸಕ್ಕೆ ಕೊರಿಯರ್ ಅಂಗಡಿ ಮಾಲೀಕ ಶಶಿ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರಿಯರ್ ಅಂಗಡಿಯಲ್ಲಿ ಬ್ಲಾಸ್ಟ್ ಪ್ರಕರಣ| ಇಬ್ಬರನ್ನು ವಶಕ್ಕೆ ಪಡೆದ ಪೊಲೀಸ್ Read More »

ಗುಡ್ ನ್ಯೂಸ್: ಮಂಗಳೂರು- ವಿಜಯಪುರ ರೈಲು ಸೇವೆ ವಿಸ್ತರಣೆ|

ಮಂಗಳೂರು ಜಂಕ್ಷನ್ ಮತ್ತು ವಿಜಯಪುರ ನಡುವೆ ಸಂಪರ್ಕ ನಡೆಸುವ ರೈಲು ಸೇವೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಪ್ರತಿದಿನ ವಿಜಯಪುರ- ಮಂಗಳೂರು ಜಂಕ್ಷನ್ ನಡುವೆ ರೈಲು ಸಂಚಾರ ನಡೆಸುತ್ತದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ಏಕೈಕ ರೈಲು ಇದಾಗಿದೆ. ಈ ರೈಲಿಗೆ ಜನರಿಂದ ಸಹ ಉತ್ತಮ ಸ್ಪಂದನೆ ಸಿಕ್ಕಿದೆ. ಹಿಂದಿನ ಆದೇಶದಂತೆ ವಿಜಯಪುರದಿಂದ ಹೊರಡುವ ರೈಲು ನಂಬರ್ 07377 ವಿಜಯಪುರ- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಸೇವೆಯು 31/1/2023ಕ್ಕೆ ಅಂತ್ಯವಾಗಬೇಕಿತ್ತು. ಹೊಸ ಆದೇಶದಂತೆ ರೈಲು

ಗುಡ್ ನ್ಯೂಸ್: ಮಂಗಳೂರು- ವಿಜಯಪುರ ರೈಲು ಸೇವೆ ವಿಸ್ತರಣೆ| Read More »

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೇಂದ್ರ ಸಚಿವ ಸ್ಮೃತಿ ಇರಾನಿ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕಿರುಷಷ್ಠಿ ಸಭಾಭವನದಲ್ಲಿ ಸಂವಾದ ನಡೆಸಿದರು. ಆ ನಂತರ ಮಧ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್

ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಪಡೆದ ಕೇಂದ್ರ ಸಚಿವ ಸ್ಮೃತಿ ಇರಾನಿ Read More »