ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಬಿಗ್ ಶಾಕ್| ಹಣ ವಂಚನೆ ಆರೋಪಿಸಿ ವ್ಯಕ್ತಿ ಹೆಸರು ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ 6 ಜನರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ.

Ad Widget ... ..

HSR ಲೇಔಟ್ ನಿವಾಸಿ 47 ವರ್ಷದ ಪ್ರದೀಪ್ ತನ್ನ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಲಾಗಿದೆ.

Ad Widget

ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್ ರೆಡ್ಡಿ, ಕೆ.ಗೋಪಿ, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಪ್ರದೀಪ್ ಡೆತ್ ​ನೋಟ್​ನಲ್ಲಿ ಮನವಿ ಮಾಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆ.ಗೋಪಿ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಅವರು ಬೆಂಬಲ ನೀಡಿದ್ದಾರೆ ಎಂದು ಪ್ರದೀಪ್ ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *