Ad Widget .

ಪ್ರೀತಿಸಲು ಒಲ್ಲೆ ಎಂದವಳ ಕತ್ತುಕೊಯ್ದು ತಾನೂ ಇರಿದುಕೊಂಡ ಭಗ್ನ ಪ್ರೇಮಿ| ಒನ್ ವೇ ಲವ್ ಗೆ ಬಲಿಯಾದ ಯುವತಿ

ಸಮಗ್ರ ನ್ಯೂಸ್: ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಪ್ರೀತಿ ಒಪ್ಪದ ಸಹಪಾಠಿ ವಿದ್ಯಾರ್ಥಿನಿಯ ಕತ್ತು ಕೊಯ್ದು ಕೊಂದಿದ್ದಲ್ಲದೆ, ತನಗೂ ಚಾಕುವಿನಿಂದ ಇರಿದುಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ.

Ad Widget . Ad Widget .

ಬೆಂಗಳೂರಿನ ರಾಜಾನುಕುಂಟೆಯಲ್ಲಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಈ ಘಟನೆ ಜರುಗಿದ್ದು, ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ತೀವ್ರ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Ad Widget . Ad Widget .

ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಟೆಕ್ ಓದುತ್ತಿದ್ದ ಲಯಸ್ಮಿತಾ ಎಂಬ ವಿದ್ಯಾರ್ಥಿನಿಗೆ ನೃಪತುಂಗ ಕಾಲೇಜಿನಲ್ಲಿ ಓದುತ್ತಿದ್ದ ಪವನ್ ಕಲ್ಯಾಣ್ ಎಂಬ ವಿದ್ಯಾರ್ಥಿ ಪ್ರೀತಿಸುತ್ತಿರುವುದಾಗಿ ಹೇಳಿದ್ದಾನೆ. ಅಲ್ಲದೇ ಆಕೆ ಕೂಡ ಪ್ರೀತಿಸಬೇಕೆಂದು ಒತ್ತಾಯಿಸಿದ್ದಾನೆ. ಆದರೆ ಆ ವಿದ್ಯಾರ್ಥಿನಿಯು ಈತನ ಪ್ರೀತಿಗೆ ಒಪ್ಪಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕಾಲೇಜಿಗೆ ನುಗ್ಗಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಆನಂತರ ತನ್ನ ಕತ್ತು ಕೊಯ್ದುಕೊಂಡಿದ್ದಾನೆ. ಇದನ್ನು ಗಮನಿಸಿದ ಇತರರು ಗಾಯಗೊಂಡ ಪವನ್ ಕಲ್ಯಾಣ್‌ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಇಬ್ಬರೂ ಸಹ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕಾಚಿಪುರ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ರಾಜಾನುಕುಂಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *