ಬೆಳ್ತಂಗಡಿ: ವಿಷ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಸಮಗ್ರ ನ್ಯೂಸ್: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.

Ad Widget ... ..

ಡಿ. 12ರಂದು ವಿಷ ಸೇವಿಸಿದ್ದ ಮಹಿಳೆಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿದ ಬಳಿಕ ಡಿ 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

Leave a Comment

Your email address will not be published. Required fields are marked *