ಸಮಗ್ರ ನ್ಯೂಸ್: ರಾಜ್ಯದಲ್ಲಿ ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಾಗಲು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು, ಸಹಾಯಕರಿಗೆ ಎಸ್ಸೆಸ್ಸೆಲ್ಸಿ ಕಡ್ಡಾಯ! ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹೊಸ ನಿಯಮ ಜಾರಿಗೆ ಬರಲಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು, ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.SE.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ ಎಸ್‌ಎಸ್‌ಎಲ್‌ಸಿ ತೇರ್ಗೆಡೆ ಹೊಂದಿರಬೇಕು. ಮಾರ್ಕ್ಸ್ ಕಾರ್ಡ್‌ನಲ್ಲಿ ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ.