Ad Widget .

ಸುಳ್ಯ ಜಾತ್ರೋತ್ಸವದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ| ತುರ್ತುಸಭೆಯಲ್ಲಿ ಸಂಘಟನೆಗಳ ಒತ್ತಡಕ್ಕೆ ಮಣಿದ ಆಡಳಿತ ಮಂಡಳಿ

ಸಮಗ್ರ ನ್ಯೂಸ್: ಸುಳ್ಯ ಜಾತ್ರೋತ್ಸವದಲ್ಲಿ ಎಲ್ಲ ಧರ್ಮೀಯರಿಗೆ ಮುಕ್ತ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಸಭೆಯಲ್ಲಿ ಈ ಮೊದಲು ಘೋಷಿಸಲಾಗಿದ್ದು, ಇದನ್ನು ಹಿಂದೂ ಸಂಘಟನೆಗಳು ವಿರೋಧ ಮಾಡಿದ್ದವು.

Ad Widget . Ad Widget .

ಈ ಕುರಿತಂತೆ ಇಂದು ತುರ್ತು ಸಭೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕೆಂದು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಮಾಡಿದ್ದರು. ತಕ್ಷಣ ಇದಕ್ಕೆ ಸ್ಪಂದಿಸಿದ ಡಾ|ಕೆ.ವಿ. ಚಿದಾನಂದ ಅವರು ತುರ್ತು ಸಭೆಯನ್ನು ಕರೆದಿದ್ದರು. ಅದರಂತೆ ಎಲ್ಲರ ನಿರ್ಣಯವನ್ನು ತೆಗೆದುಕೊಂಡು ಅಂತಿಮವಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಎಂಬ ನಿರ್ಧಾರಕ್ಕೆ ಬರಲಾಯಿತು.

Ad Widget . Ad Widget .

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರ ನಡೆಸಲು ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಒತ್ತಾಯಿಸಿ ಸುಳ್ಯ ತಾಲೂಕು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ|ಕೆ.ವಿ. ಚಿದಾನಂದ ಅವರಿಗೆ ಮನವಿ ಸಲ್ಲಿಸಿದ್ದರು.

Leave a Comment

Your email address will not be published. Required fields are marked *