Ad Widget .

ಮಂಡ್ಯ: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ಜನರನ್ನು ಬಿಟ್ಟುಬಿಡದೆ ಕಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿನೊಳಗೆ ಸೆರೆಸಿಕ್ಕಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Ad Widget . Ad Widget .

ಕಳೆದ ಕೆಲದಿನಗಳಿಂದ ಈ ಭಾಗದಲ್ಲಿ ಆಗಾಗ್ಗೆ ಚಿರತೆ‌ ಕಾಣಿಸಿಕೊಳ್ಳುತ್ತಿದ್ದು, ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಅದರ ಆಹಾರ ತಿನ್ನಲು ಹೋಗಿ ಸೆರೆಯಾಗಿದೆ.

Ad Widget . Ad Widget .

ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿಯುತ್ತಿದ್ದಂತೆ ಸಮಾಧಾನಗೊಂಡಿದ್ದಾರೆ. ಇನ್ನೊಂದೆಡೆ ಚಿರತೆ ಬೋನಿಗೆ ಬಿದ್ದ ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸೆರೆಯಾದ ಚಿರತೆಯನ್ನ ದೂರದ ಅರಣ್ಯಕ್ಕೆ ಬಿಡಲು ನಿರ್ಧರಿಸಿದ್ದಾರೆ.

Leave a Comment

Your email address will not be published. Required fields are marked *