Ad Widget .

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ ಹಿನ್ನಲೆ ಖಾಸಗಿ‌ ಕಾಲೇಜಿನ ಮೇಲೆ ಎನ್ಐಎ ದಾಳಿ| ಓರ್ವ ವಿದ್ಯಾರ್ಥಿ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದಂತ ಆಟೋದಲ್ಲಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದೆ. ಈ ಸಂಬಂಧ ನಗರದಲ್ಲಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಪಿ.ಎ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದಾಗಿ ತಿಳಿದು ಬಂದಿದೆ.

Ad Widget . Ad Widget .

ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬಂಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಆತ ನೀಡಿದ ಮಾಹಿತಿಯ ಆಧಾರ ಮೇಲೆ ಇಂದು ಪಿ ಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ 7 ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದ್ದಾರೆ.

Ad Widget . Ad Widget .

ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುವ ಕೆಲಸದಲ್ಲಿ ಎನ್‌ಐಎ ಅಧಿಕಾರಿಗಳು ನಿರತರಾಗಿದ್ದಾರೆ.

ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಂತ ಉಡುಪಿ ಮೂಲಕ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಶಿವಮೊಗ್ಗದಲ್ಲಿ ನಡೆದಿದ್ದ ಟ್ರಯಲ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ತುಂಗಾದಡದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಮಾಜ್ ಮುನೀರ್ ಬಂಧಿಸಿದ್ದರು. ಈ ಪ್ರಕರಣವನ್ನು ಸರ್ಕಾರ ಎನ್‌ಐಎಗೆ ವಹಿಸಿತ್ತು. ಈ ಸಂಬಂಧ ತನಿಖೆ ನಡೆಸಿದ್ದಂತ ಎನ್‌ಐಎ ಅಧಿಕಾರಿಗಳು, ಮಾಜ್ ಜೊತೆಗೆ ಉಗ್ರರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರಿನ ಪಿ.ಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದಂತ ವಿದ್ಯಾರ್ಥಿ ತಾಜುದ್ದೀನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿದ್ದು ತ‌ನಿಖೆ ಮುಂದುವರೆದಿದೆ.

Leave a Comment

Your email address will not be published. Required fields are marked *