ಕುಕ್ಕೆಯಲ್ಲಿ ನೈತಿಕ‌ ಪೊಲೀಸ್ ಗಿರಿ| ಹಿಂದೂ ಹುಡುಗಿಯೊಂದಿಗೆ ತಿರುಗಾಟದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಹಲ್ಲೆ

ಸಮಗ್ರ ನ್ಯೂಸ್: ಹಿಂದೂ ಹುಡುಗಿ ಜೊತೆ ತಿರುಗಾಡುತ್ತಿದ್ದಾನೆಂದು ಆರೋಪಿಸಿ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿ ಪೊಲೀಸ್ ದೂರು ನೀಡಿದ್ದಾನೆ.

Ad Widget ... ..

ಕುಕ್ಕೆ ಸುಬ್ರಹ್ಮಣ್ಯದ ಬಸ್ ಸ್ಟ್ಯಾಂಡ್ ನಲ್ಲಿ ಹುಡುಗ ಮತ್ತು ಹುಡುಗಿ ಕಂಡು ಬಂದಿದ್ದು, ಬಳಿಕ ಈ ಜೋಡಿ ಕುಮಾರಧಾರ ಬಳಿ ಬಂದಾಗ ಯುವಕರ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ.

Ad Widget

ಹಲ್ಲೆಗೊಳಗಾದ ಯುವಕ ಸುಳ್ಯ ತಾಲೂಕಿನ ಕಲ್ಲುಗುಂಡಿಯ ಅಫೀದ್ ಎಂದು ತಿಳಿದು ಬಂದಿದ್ದು, ಗಂಭೀರ ಗಾಯಗೊಂಡ ಈತ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ನಡುವೆ ಅಫೀದ್‌ನ ಜತೆ ಬಂದಿರುವ ಹುಡುಗಿ ಅಪ್ರಾಪ್ತ ವಯಸ್ಸಿನವಳೆಂದು ತಿಳಿದುಬಂದಿದೆ. ಅಫೀದ್‌ ಬಾಲಕಿಯನ್ನು ಪುಸಲಾಯಿಸಿ ಹೀಗೆ ಕರೆದುಕೊಂಡು ಬಂದಿದ್ದಾನೆ ಎಂದು ಆಕೆ ತಂದೆಯೂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಯುವಕನ ವಿರುದ್ದ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿರುವ ಸುಬ್ರಹ್ಮಣ್ಯ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *