ಏರ್ ಇಂಡಿಯಾದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದಾತ ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ನವೆಂಬರ್ 26ರಂದು ನ್ಯೂಯಾರ್ಕ್ – ದೆಹಲಿ ಮಧ್ಯೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆರೋಪ ಹೊತ್ತಿದ್ದ ಮುಂಬೈ ಮೂಲದ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

Ad Widget ... ..

ನವೆಂಬರ್ 26ರಂದು ಈ ಘಟನೆ ನಡೆದಿತ್ತಾದರೂ ತಡವಾಗಿ ಬೆಳಕಿಗೆ ಬಂದಿತ್ತು. ಇದರ ಬಳಿಕ ಶಂಕರ್ ಮಿಶ್ರಾ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ ತಮ್ಮ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದ ಮೂಲಕ ತಮ್ಮ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದರು.

Ad Widget

ಆದರೆ ಅವರು ತಮ್ಮ ಕ್ರೆಡಿಟ್ ಕಾರ್ಡ್ ಬಳಸಿದ್ದು, ಇದರ ಮಾಹಿತಿ ಪಡೆದ ಪೊಲೀಸರು ಕೊನೆಗೂ ಶಂಕರ್ ಮಿಶ್ರಾನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಂಬೈಗೆ ಕರೆದೊಯ್ದು ಪೊಲೀಸರ ಮುಂದೆ ಹಾಜರುಪಡಿಸಲಿದ್ದಾರೆ.

Leave a Comment

Your email address will not be published. Required fields are marked *