Ad Widget .

ಗಣರಾಜ್ಯೋತ್ಸವ ಪರೇಡ್ ನ ಟ್ಯಾಬ್ಲೋಗೆ ಅವಕಾಶ ನಿರಾಕರಣೆ| ಕರ್ನಾಟಕಕ್ಕೆ ಕೋಕ್ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ನವದೆಹಲಿಯ ಕರ್ತವ್ಯ ಪಥದಲ್ಲಿ ಜ.26ರ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳುವುದಿಲ್ಲ. 13 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ರಾಜ್ಯದ ಸ್ತಬ್ಧ ಚಿತ್ರವನ್ನು ತಿರಸ್ಕರಿಸುವುದರಿಂದ ರಾಜ್ಯಕ್ಕೆ ಅವಕಾಶ ಕೈತಪ್ಪಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯ ಸರ್ಕಾರದ ಅಧಿಕಾರಿಗಳು ಈ ವಿಷಯ ತಿಳಿಸಿದ್ದು, 2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಸಲ್ಲಿಸಿದ್ದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ.

Ad Widget . Ad Widget . Ad Widget .

ತಜ್ಞರ ಸಮಿತಿಯ ಮೊದಲ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕ ಪ್ರತಿನಿಧಿಸಿದ್ದ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಕೊನೆಯ ಸುತ್ತಿನಲ್ಲಿ ಕರ್ನಾಟಕದ ಸ್ಥಬ್ಧಚಿತ್ರನ್ನು ತಿರಸ್ಕರಿಸಲಾಗಿದೆ. ಇತರ ರಾಜ್ಯಗಳು ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ. ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡಲಾಗುತ್ತಿದೆ ಎಂಬ ಆಕ್ಷೇಪ ವ್ಯಕ್ತವಾಗಿದೆ ಎಂದು ಎಂದು ತಿಳಿಸಿದ್ದಾರೆ.

ಈ ಹಿಂದೆ ಕರ್ನಾಟಕವು ಸ್ಥಬ್ಧಚಿತ್ರಕ್ಕಾಗಿ ಪ್ರಶಸ್ತಿಗಳನ್ನು ಗೆದ್ದಿತ್ತು. ಕೆಲವು ಸ್ಥಬ್ಧಚಿತ್ರಕ್ಕಾಗಿ ವ್ಯಾಪಕ ಮೆಚ್ಚುಗೆ ಪಡೆದಿತ್ತು. 2022ರ ಗಣರಾಜ್ಯೋತ್ಸವದಲ್ಲಿ ಕೇರಳ ಸಲ್ಲಿಸಿದ್ದ ನಾರಾಯಣಗುರು ಸ್ಥಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿರಲಿಲ್ಲ.

Leave a Comment

Your email address will not be published. Required fields are marked *