Ad Widget .

ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕರಿಂದ ದಾಳಿ

ಸಮಗ್ರ ನ್ಯೂಸ್: ಭಜರಂಗ ದಳ ಕಾರ್ಯಕರ್ತರೊಬ್ಬರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ ಭಾನುವಾರ ಶಿವಮೊಗ್ಗದಲ್ಲಿ ನಡೆದಿದೆ. ಪ್ಲಂಬರ್ ಕೆಲಸ ಮಾಡುತ್ತಿರುವ ಭಜರಂಗದಳ ಕಾರ್ಯಕರ್ತ ಮನೋಜ್‌ ಅವರು ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಆತನ ಮೇಲೆ ಹಲ್ಲೆ ನಡೆದಿದೆ.

Ad Widget . Ad Widget .

ಮನೋಜ್‌ ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಗಾಯಗೊಂಡಿರುವ ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೋಜ್‌ಗೆ ಹಲ್ಲೆಯಾಗಿರುವುದನ್ನು ತಿಳಿದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದರು.

Ad Widget . Ad Widget .

ಶಿವಮೊಗ್ಗದಲ್ಲಿ ಭಾನುವಾರ ಬಜರಂಗದಳ ವತಿಯಿಂದ ಶೌರ್ಯ ಯಾತ್ರೆ ಆಯೋಜಿಸಲಾಗಿತ್ತು. ಆದರೆ, ಮನೋಜ್‌ ಸಮಾವೇಶಕ್ಕೂ ತೆರಳದೆ ಕೆಲಸಕ್ಕೆ ಹೋಗಿದ್ದರು. ಆದರೂ ಅವರ ಮೇಲೆ ಹಲ್ಲೆ ನಡೆದಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *