ಮಂಗಳೂರು: ತಿಮಿಂಗಿಲ ವಾಂತಿ(ಅಂಬರ್ ಗ್ರೀಸ್) ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಂಬರ್-ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಕೋಟ್ಯಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

Ad Widget ... ..

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆ ಕುಕ್ಕಳ ಮನೆ ನಿವಾಸಿ ಯೋಗೀಶ್ ಪೂಜಾರಿ(41) ಬಂಧಿತ ಆರೋಪಿಗಳು. ಬಂಧಿತರಿಂದ 3.2 ಕೆಜಿ ತೂಕದ ಅಂಬರ್ ಗ್ರೀಸ್ ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ರೂ. ಮೌಲ್ಯ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಅಂಬರ್-ಗ್ರೀಸ್ ನ್ನು ವಶದಲ್ಲಿಟ್ಟು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಖಚಿತ ಮಾಹಿತಿಯನ್ನು ಆಧರಿಸಿ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ. ನೇತೃತ್ವದಲ್ಲಿ ಪಿಎಸ್ಸೈಯವರಾದ ರಾಜೇಂದ್ರ ಬಿ, ಸುದೀಪ್ ಎಂ.ವಿ. ಹಾಗೂ ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *