Ad Widget .

ಉದ್ಯೋಗ ಖಾತರಿ ಯೋಜನೆಯಲ್ಲಿ ಭ್ರಷ್ಟಾಚಾರ ಕುರಿತು ದೂರು ನೀಡಿದಾತನ ಕಗ್ಗೊಲೆ| ಭ್ರಷ್ಟಾಚಾರಿಗಳೇ ಕೊಲೆಗೈದಿರುವ ಶಂಕೆ

ಸಮಗ್ರ ನ್ಯೂಸ್: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅವ್ಯವಹಾರ ನಡೆದಿದೆ ಎಂದು ದೂರು ಸಲ್ಲಿಸಿದ್ದ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ನಡೆದಿದೆ.

Ad Widget . Ad Widget .

ಕನ್ನಡ ಪರ ಸಂಘಟನೆ ತಾಲೂಕು ಅಧ್ಯಕ್ಷ ರಾಮಕೃಷ್ಣ (30) ಕೊಲೆಯಾದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್, ಪ್ರಶಾಂತ ಎಂಬುವರನ್ನು ಬಂಧಿಸಲಾಗಿದೆ.

Ad Widget . Ad Widget .

ಶನಿವಾರ ರಾತ್ರಿ ಹೊಸಕೆರೆ ಡಾಬಾದಲ್ಲಿ ರಾಮಕೃಷ್ಣ ಮತ್ತು ಇತರರು ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಬೇರೆ ವಿಚಾರ ಪ್ರಸ್ತಾಪಿಸಿ, ಮಾತಿಗೆ ಮಾತು ಬೆಳೆಸಿದ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷನಾಗಿದ್ದ ಗೌರಿಪುರ ಮೂಲದ ರಾಮಕೃಷ್ಣ ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಅದೇ ದ್ವೇಷದಿಂದ ರಾಮಕೃಷ್ಣ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

Leave a Comment

Your email address will not be published. Required fields are marked *