ಸಮಗ್ರ ನ್ಯೂಸ್: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯವರು ಹೊರತರಲು ಮುಂದಾಗಿರುವ “ಸಿದ್ದು ನಿಜಕನಸು ಪುಸ್ತಕ”ದ ಬಿಡುಗಡೆಗೆ ನ್ಯಾಯಾಲಯದ ತಡೆಯಾಜ್ಞೆ ನೀಡಿದೆ.
ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ನ್ಯಾಯಾಲಯದಲ್ಲಿ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು. ಇದನ್ನು ಮಾನ್ಯ ಮಾಡಿರುವ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ಕೃತಿ ಬಿಡುಗಡೆಗೆ ತಡೆಯಾಜ್ಞೆ ನೀಡಿ, ಪುಸ್ತಕ ಬಿಡುಗಡೆಗೊಳಿಸಲಿದ್ದ ಸಚಿವ ಡಾ.ಅಶ್ವತ್ಥನಾರಾಯಣ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಪುಸ್ತಕ ಬಿಡುಗಡೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಪುರಭವನದ ಮುಂಭಾಗ ಭಾರೀ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಸೋಮವಾರ ನಗರದ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.