ಸುರತ್ಕಲ್: ಶಾಲೆಗೆ ಹೊರಡುತ್ತಿದ್ದ ಬಾಲಕ ಹೃದಯಾಘಾತದಿಂದ ವಿಧಿವಶ

ಸಮಗ್ರ ನ್ಯೂಸ್: ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸುರತ್ಕಲ್ ನಲ್ಲಿ ನಡೆದಿದೆ.

Ad Widget ... ..

ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್‌ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರು.

Ad Widget

ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು.

ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಮುಂದಾದಾಗ ಪೋಷಕರು ಮೃತದೇಹವನ್ನು ಕೊಂಡೊಯ್ಯುವ ಬಗ್ಗೆ ವೈದ್ಯರಲ್ಲಿ ತಿಳಿಸಿದ್ದರು. ಆದರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸದೆ ಬಿಟ್ಟುಕೊಡಲು ಒಪ್ಪಲಿಲ್ಲ. ಈ ಬಗ್ಗೆ ಗೊಂದಲ ಉಂಟಾದ ಕಾರಣ ಮಾಜಿ ಶಾಸಕ ಮೊದಿನ್‌ ಬಾವಾ ಅವರು ಸ್ಥಳಕ್ಕೆ ಆಗಮಿಸಿ ಬಾಲಕನ ಅಂತ್ಯಕ್ರಿಯೆಗೆ ಬೇಕಾದ ವ್ಯವಸ್ಥೆ ಮಾಡಿಕೊಟ್ಟರು.

Leave a Comment

Your email address will not be published. Required fields are marked *