Ad Widget .

ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ‌ ವಿಮಾನಕ್ಕೆ ಬಾಂಬ್ ಬೆದರಿಕೆ| ಗುಜರಾತ್ ನಲ್ಲಿ ತುರ್ತು ಭೂಸ್ಪರ್ಶ

ಸಮಗ್ರ ನ್ಯೂಸ್: ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಕಾರಣ ಗುಜರಾತ್‌ ಜಾಮ್ ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Ad Widget . Ad Widget .

ವಿಮಾನದಲ್ಲಿದ್ದ 236 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಅಶೋಕ್ ಕುಮಾರ್ ಯಾದವ್ ತಿಳಿಸಿದ್ದಾರೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಹಾಗೂ ಸ್ಥಳೀಯ ಅಧಿಕಾರಿಗಳು ವಿಮಾನವನ್ನು ಪರಿಶೀಲಿಸುತ್ತಿದ್ದಾರೆ. ಪೊಲೀಸರು, ಬಿಡಿಡಿಎಸ್ ಮತ್ತು ಸ್ಥಳೀಯ ಅಧಿಕಾರಿಗಳು ಇಡೀ ವಿಮಾನವನ್ನು ಶೋಧಿಸುತ್ತಿದ್ದಾರೆ ಎಂದರು. ಪ್ರಯಾಣಿಕರು ಶಾಂತವಾಗಿರುವಂತೆ ಜಾಮ್ನಗರ ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ವಿಮಾನದ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ತಂಡಗಳೂ ವಿಮಾನ ನಿಲ್ದಾಣ ತಲುಪಿವೆ. ವಿಮಾನದ ಕೂಲಂಕಷ ತನಿಖೆಯ ನಂತರವೇ ವಿಮಾನವನ್ನು ಮತ್ತಷ್ಟು ಹಾರಾಟಕ್ಕೆ ಅನುಮತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಗೋವಾ ಎಟಿಸಿಗೆ ಇ-ಮೇಲ್ ಎಚ್ಚರಿಕೆ ಬಂದಿದೆ ಎಂದು ಹೇಳಲಾಗಿದೆ.

ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ವಿಮಾನ ನಿಲ್ದಾಣದ ಸಂಚಾರ ನಿಯಂತ್ರಣಕ್ಕೆ ಮಾಹಿತಿ ಬಂದ ತಕ್ಷಣ ಅಧಿಕಾರಿಗಳು ವಿಮಾನವನ್ನು ಗುಜರಾತ್‌ನ ಜಾಮ್ ನಗರ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರಿಸಿರುವ ಬಗ್ಗೆ ಎಟಿಸಿಗೆ ಮಾಹಿತಿ ಬಂದ ಕೂಡಲೇ ವಿಮಾನವನ್ನು ಜಾಮ್ ನಗರಕ್ಕೆ ತಿರುಗಿಸಲಾಯಿತು ಎಂದು ಜಾಮ್ ನಗರ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ತರಾತುರಿಯಲ್ಲಿ, ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಯಿತು ಮತ್ತು ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲು ಯೋಜಿಸಲಾಯಿತು.

ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಸದ್ಯ ವಿಮಾನದ ತನಿಖೆ ನಡೆಸಲಾಗಿದೆ. ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಮತ್ತು ಪೊಲೀಸ್ ಪಡೆಗಳನ್ನು ಸಹ ಸ್ಥಳಕ್ಕೆ ಕರೆಸಲಾಗಿದೆ.

ಸೋಮವಾರ ಬಾಂಬ್ ಬೆದರಿಕೆ ಬಂದ ನಂತರ, ವಿಮಾನವನ್ನು ಜಾಮ್‌ನಗರಕ್ಕೆ ತಿರುಗಿಸಲಾಗಿತ್ತು. ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ, ಅದರಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಪತ್ತೆಯಾಗಿಲ್ಲ ಎಂದು ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *