ರಾಜ್ಯ ರಾಜಕೀಯದತ್ತ ಕಿಚ್ಚ ಸುದೀಪ್!? ಬಿಗ್ ಬಾಸ್ ಗೆ ಭರ್ಜರಿ ಆಫರ್ ನೀಡಿದ ‘ಕೈ’ ಪಕ್ಷ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರನ್ನು ಗಾಳ ಹಾಕಿದೆ ಎನ್ನಲಾಗುತ್ತಿದೆ.

Ad Widget ... ..

ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವಂತೆ ರಾಹುಲ್ ಗಾಂಧಿ ಮೂಲಕವೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಗೆ ಪಕ್ಷ ಸೇರುವಂತೆ ಆಹ್ವಾನ ನೀಡಿದೆ, ಚಿತ್ರದುರ್ಗ ಅಥವಾ ಶಿವಮೊಗ್ಗದಿಂದ ಕಾಂಗ್ರೆಸ್ ಟಿಕೆಟ್ ಕೊಡಲು ಆಫರ್ ಕೊಡಲಾಗಿದೆ ಎಂದು ಹೇಳಲಾಗುತ್ತಿದೆ.

Ad Widget

ಮಾಜಿ ಸಂಸದೆ ರಮ್ಯಾ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದು, ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಆಫರ್ ಮಾಡಿದ್ದಾರೆ ಎಂದೂ ಹೇಳಲಾಗಿದೆ. ಆದರೆ ಸುದೀಪ್ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

Leave a Comment

Your email address will not be published. Required fields are marked *