ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರು.

Ad Widget ... ..

ಗಡಿನಾಡು ಕಾಸರಗೋಡಿನಲ್ಲಿ 1936, ಜೂನ್ 30ರಂದು ಹುಟ್ಟಿದ ಸಾರಾ ಅವರು, ಮಹಿಳಾ ಸಮಾನತೆ, ಸಬಲೀಕರಣ ಸೇರಿದಂತೆ ವಿವಿಧ ಚಿಂತನೆಯ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.

Ad Widget

ಇವರು 10 ಕಾದಂಬಲಿ, 6 ಕಥಾ ಸಂಕಲನ, 5 ಬಾನುಲಿ ನಾಟಕ ಸೇರಿದಂತೆ ವಿವಿಧ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಇದರಲ್ಲಿ ‘ಚಂದ್ರಗಿರಿಯ ತೀರದಲ್ಲಿ’ ಸಾರಾ ಅವರ ಜನಪ್ರಿಯ ಕಾದಂಬರಿಗಳಲ್ಲಿ ಒಂದಾಗಿದೆ.

Leave a Comment

Your email address will not be published. Required fields are marked *