ಮಡಿಕೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ‌ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ನೇತಾಜಿ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಎಲ್ಐಸಿ ಏಜೆಂಟ್ ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ.

Ad Widget ... ..

ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ad Widget

ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸ್ ಪಿಎಸ್ಐ ಅಪ್ಪಾಜಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

Your email address will not be published. Required fields are marked *