ಬೆಳ್ತಂಗಡಿ:ಕಿಂಡಿ ಅಣೆಕಟ್ಟಿನ ಬದಿ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್ : ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ಜ.10 ರಂದು ಸಂಜೆ ವರದಿಯಾಗಿದೆ.

Ad Widget ... ..

ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ ಗಾಣಿಗ(27) ಮೃತ ಯುವಕ ಎಂದು ಗುರುತಿಸಲಾಗಿದೆ. ಈತನ ಮೃತದೇಹ ಅಲ್ಲೇ ಸಮೀಪದಲ್ಲಿ ಹರಿಯುವ ನದಿಯ ಕಿಂಡಿ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Ad Widget

ಸ್ಥಳಕ್ಕೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ಕಿರಣ್ ಸಾವಿಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *