Ad Widget .

ನೇಣುಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ‌ ಬಾಡಿಬಿಲ್ಡರ್ | ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್‌ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್‌ ಎಂದು ಗುರುತಿಸಲಾಗಿದೆ.

Ad Widget . Ad Widget .

ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.

Ad Widget . Ad Widget .

ಈ ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಘಟನೆಯ ಸಂಬಂಧ ಪೊಲೀಸರು ತನಿಖೆ ಚುರುಕುಗೊಂಡಿದೆ. ಈವರೆಗೆ ಸಾವಿಗೆ ಯಾವುದೇ ಪ್ರಮುಖ ಕಾರಣಗಳು ಪತ್ತೆಯಾಗಿಲ್ಲ. ಆದರೆ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *