ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿದ ಯುವಕ

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ ಘಟನೆ ನಡೆದಿದೆ.

. Ad Widget . Ad Widget

ಜನವರಿ 8ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ. ನಿಲ್ದಾಣದ ನಿರ್ಗಮನ ಗೇಟ್‌ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್‌ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

. Ad Widget . . Ad Widget . Ad Widget

ವ್ಯಕ್ತಿ ದೆಹಲಿಯಿಂದ ಸೌದಿ ಅರೇಬಿಯಾದ ದಮಾಮ್‌ಗೆ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆತ ವಿಮಾನ ನಿಲ್ದಾಣಕ್ಕೆ ಮದ್ಯಪಾನ ಮಾಡಿ ಬಂದಿದ್ದು, ನಶೆಯಲ್ಲಿ ಈ ರೀತಿಯ ಕೃತ್ಯ ಮಾಡಿದ್ದಾನೆ. ಇದಲ್ಲದೇ ಆತ ಸುತ್ತಮುತ್ತಲಿನ ಇತರ ಪ್ರಯಾಣಿಕರಿಗೂ ನಿಂದಿಸಿ ತೊಂದರೆ ಕೊಟ್ಟಿದ್ದಾನೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೀಡಿದ ದೂರಿನ ಆಧಾರದ ಮೇಲೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪೊಲೀಸರು ಭಾರತೀಯ ದಂಡಸಂಹಿತೆ (IPC) ಸೆಕ್ಷನ್ 294 ಹಾಗೂ 510ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ಬಂಧನ ಮಾಡಿದ ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

Leave a Comment

Your email address will not be published. Required fields are marked *