Ad Widget .

ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಒಕ್ಕಲಿಗ, ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಹೈಕೋರ್ಟ್ ತಡೆ

ಸಮಗ್ರ ನ್ಯೂಸ್: ಹೈಕೋರ್ಟ್​​ನಲ್ಲಿ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬುವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಈಗ ವಿಚಾರಣೆ ನಡೆಸಿರುವ ಹೈಕೋರ್ಟ್​, ಅಂತಿಮ ತೀರ್ಪು ನೀಡುವತನಕ ಸರ್ಕಾರ ಈ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.

Ad Widget . Ad Widget . Ad Widget .

ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ 3A ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ್​​ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೇ 3B ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.

Leave a Comment

Your email address will not be published. Required fields are marked *