Ad Widget .

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮನೆಗೆ 200 ಯೂನಿಟ್ ಪ್ರೀ ವಿದ್ಯುತ್ – ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ.

Ad Widget . Ad Widget .

ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಪ್ರಜಾಧ್ವನಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

Ad Widget . Ad Widget .

ಬೆಳಗಾವಿಯ ಈ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದ ನಲುಗಿ ಹೋಗಿದೆ. ಕರ್ನಾಟಕ ಜನತೆಯ ಕಷ್ಟ ಕಾರ್ಪಣ್ಯಗಳು ತೊಲಗಲಿ ಎಂದು ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಘೋಷಣೆ ಮಾಡಿದ ಅವರು, ವೇದಿಕೆಯ ಮೇಲೆಯೇ ಉಚಿತ ವಿದ್ಯುತ್ ಭಿತ್ತಿಚಿತ್ರಗಳನ್ನು ಕಾಂಗ್ರೆಸ್ ನಾಯಕರು ಪ್ರದರ್ಶನ ಮಾಡಿದರು.

Leave a Comment

Your email address will not be published. Required fields are marked *