Ad Widget .

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಭಜರಂಗದಳ ಮುಖಂಡನ ಶವ..!! ಸಾವಿನ ಸುತ್ತ ಅನುಮಾನದ ಹುತ್ತ

ಸಮಗ್ರ ನ್ಯೂಸ್: ಪಾಣೆಮಂಗಳೂರು ಹಳೆಯ ಸೇತುವೆಯ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಶವ ಪತ್ತೆಯಾದ ಘಟನೆ ನಡೆದಿದೆ. ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ.

Ad Widget . Ad Widget .

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರ ವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget .

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ.

ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ. ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *