Ad Widget .

ಶಿರಢಿಗೆ ಹೊರಟಿದ್ದ ಟ್ರಕ್ ಗೆ ಬಸ್ ಡಿಕ್ಕಿ: 10 ಮಂದಿ ಸಾವು…!!

ಸಮಗ್ರ ನ್ಯೂಸ್: ಶಿರಢಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

Ad Widget . Ad Widget .

ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ಹೋಗುತ್ತಿತ್ತು ಎಂದು ಅವರು ಹೇಳಿದರು. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತೆಹಸಿಲ್‌ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Ad Widget . Ad Widget .

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆ ಮತ್ತು ಸಿನ್ನಾರ್‌ನಲ್ಲಿರುವ ಯಶವಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *