Ad Widget .

ಬಾಲಕಿಯನ್ನು ಅಪಹರಿಸಿ ಒಂದು ತಿಂಗಳು ಅತ್ಯಾಚಾರ ಎಸಗಿದ ಅಪ್ರಾಪ್ತ

ಸಮಗ್ರ ನ್ಯೂಸ್: 17 ವರ್ಷದ ಅಪ್ರಾಪ್ತನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಒಂದು ತಿಂಗಳ ಕಾಲ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಎಂಬಲ್ಲಿ ನಡೆದಿದೆ. ಒಂದು ತಿಂಗಳ ಹಿಂದೆ ಅದೇ ಗ್ರಾಮದ 17 ವರ್ಷದ ಹುಡುಗ 15 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget . Ad Widget .

ಬಾಲಕಿಯ ತಂದೆಯ ದೂರಿನ ಮೇರೆಗೆ ಡಿಸೆಂಬರ್ 25 ರಂದು ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಹುಡುಗ ಹುಡುಗಿಯನ್ನು ಗುಜರಾತ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ದೂರಲಾಗಿದೆ.

Ad Widget . Ad Widget .

ಗುರುವಾರ ಗುಜರಾತ್‌ನಿಂದ ತನ್ನ ಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ನಾಗ್ರಾ ಪಟ್ಟಣದ ಗದ್ವಾರ್ ಮೋರ್ ಬಳಿ ಆರೋಪಿಯನ್ನು ಬಂಧಿಸಲಾಯಿತು. ಇದೀಗ ಆರೋಪಿಯನ್ನು ಮೌವಿನಲ್ಲಿರುವ ಮಕ್ಕಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೋಕ್ಸೋ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳನ್ನು ಎಫ್‌ಐಆರ್‌ಗೆ ಸೇರಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *