Ad Widget .

ಬಸ್ ನಲ್ಲಿ ವಿದ್ಯಾರ್ಥಿನಿಗೆ “ಚಾಕಲೇಟು ಬೇಕಾ” ಕೇಳಿದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Ad Widget . Ad Widget .

ಮಂಗಳೂರಿನ ಬಲ್ಮಠದ ಪದವಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಶಾಕೀರ್ ಗುರುವಾರ ಕಾಲೇಜಿನಿಂದ ಮನೆಗೆ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ಮರಳುತ್ತಿದ್ದರು. ಪಕ್ಕದ ಸೀಟಿನಲ್ಲಿ ಕುಳಿತಿದ್ದ ಪರಿಚಯದ ವಿದ್ಯಾರ್ಥಿನಿಯನ್ನು ಮಾತನಾಡಿಸಿ, ಆಕೆಗೆ ಚಾಕಲೇಟು ಬೇಕೇ ಎಂದು ಕೇಳಿದ್ದರು’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವೀರಕಂಬ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿನಲ್ಲಿದ್ದ ಆರೋಪಿಗಳಾದ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವ‌ರು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳಿನಿಂದ ಈಚೆಗೆ ಮತೀಯ ಗೂಂಡಾಗಿರಿಗೆ ಸಂಬಂಧಿಸಿದ 10ಕ್ಕೂ ಅಧಿಕ ಪ್ರಕರಣಗಳು ನಡೆದಿವೆ.

Leave a Comment

Your email address will not be published. Required fields are marked *