Ad Widget .

ಊಟದ ವಿಚಾರಕ್ಕೆ ಜಗಳ| ತಾಯಿ ಮಗ ಆತ್ಮಹತ್ಯೆ

ಸಮಗ್ರ ನ್ಯೂಸ್: ಊಟದ ವಿಚಾರಕ್ಕೆ ಜಗಳ ಉಂಟಾಗಿ ತಾಯಿ , ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‍ನಲ್ಲಿ ನಡೆದಿದೆ.

Ad Widget . Ad Widget .

ಮೃತರನ್ನು ವಿಜಯಲಕ್ಷ್ಮಿ (50) ಹಾಗೂ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Ad Widget . Ad Widget .

ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ತಾಯಿ ಮೃತಪಟ್ಟ ವಿಚಾರ ತಿಳಿದು ತೀವ್ರವಾಗಿ ಮನನೊಂದ ಹರ್ಷ ನಾನೇ ತಾಯಿಯ ಸಾವಿಗೆ ಕಾರಣನಾದೆ ಎಂದು ಭಾವಿಸಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *