Ad Widget .

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಿಯಕರನ ಬಂಧನ

ಸಮಗ್ರ ನ್ಯೂಸ್: ಪ್ರೇಮ ವೈಫಲ್ಯದಿಂದ ಮನನೊಂದು ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೇಶ್ ನನ್ನು ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನಿತೇಶ್ ನನ್ನು ತರುಣಿ ಪ್ರೀತಿಸುತ್ತಿದ್ದಳು.ಪ್ರೇಮಿಗಳ ಮಧ್ಯೆ ಜಗಳವಾಗಿ ಜನವರಿ 10ರಂದು ಆಕೆ ವಿಷ ಸೇವಿಸಿದ್ದಳು. ನಾಲ್ಕು ದಿನಗಳ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಕೆ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾಯುವ ಮುನ್ನ ಆಸ್ಪತ್ರೆ ಬೆಡ್ ನಲ್ಲಿ ಲಿಖಿತ ಹೇಳಿಕೆ ದಾಖಲಿಸಿದ್ದಳು.

Ad Widget . Ad Widget .

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಿತೇಶ್ ನಾಪತ್ತೆಯಾಗಿದ್ದ. ಇದೀಗ ಆರೋಪಿಯನ್ನು ಚಿಕ್ಕಮಗಳೂರು ನಗರದ ಬಸ್ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಕುದುರೆಮುಖ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *