Ad Widget .

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರುನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

Ad Widget . Ad Widget .

ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದಾರೆ. ಈ ಪ್ರಕರ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ ಮುಂದುವರಿದಿದೆ.

Ad Widget . Ad Widget .

ದೂರಿನಲ್ಲಿ ಏನಿದೆ..?
ಜ. 17ರಂದು ಮೃತರ ತಾಯಿ ಗಿರಿಜಾರವರು ತನ್ನ ತೋಟಕ್ಕೆ ಹೋಗಿದ್ದಾಗ ಮಗಳಾದ ಜಯಶ್ರೀ ಮನೆಯಿಂದ ಅಮ್ಮಾ ಎಂದು ಕೂಗಿಕೊಂಡು ಗಿರಿಜಾರವರ ಬಳಿಗೆ ಓಡಿ ಬಂದಿದ್ದಾರೆ. ಈ ವೇಳೆ ಅವಳ ಹೊಟ್ಟೆಯಲ್ಲಿ ಗಾಯವಾಗಿ ರಕ್ತ ಸ್ರಾವವಾಗುತ್ತಿರುವುದು ಕಂಡು ಬಂದಿದ್ದು, ತಕ್ಷಣ ಗಿರಿಜಾರವರು ಆಟೋ ರಿಕ್ಷಾದಲ್ಲಿ ಜಯಶ್ರೀಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಈ ವಳೆ ವೈದ್ಯರು ಪರೀಕ್ಷಿಸಿ ಜಯಶ್ರೀಯು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಜಯಶ್ರೀಯನ್ನು ಕನಕಮಜಲಿನ ಉಮೇಶ ಎಂಬವನು ಕೆಲವು ಸಮಯದಿಂದ ಪ್ರೀತಿಸುತ್ತಿದ್ದು, ಆತನು ಆಗ್ಗಾಗ್ಗೆ ಗಿರಿಜಾರವರ ಮನೆಗೂ ಬರುತ್ತಿದ್ದನು. ಆದರೆ ಇತ್ತೀಚೆಗೆ ಅವನ ಗುಣ ನಡತೆ ಜಯಶ್ರೀಗೆ ಇಷ್ಟವಾಗದ ಕಾರಣ 2022ನೇ ನವೆಂಬರ್ ವೇಳೆಗೆ ಜಯಶ್ರೀಯು ಉಮೇಶನನ್ನು ದೂರ ಮಾಡಿರುತ್ತಾಳೆ. ಈ ವಿಷಯದಲ್ಲಿ ಉಮೇಶನು ಅಸಮಾಧಾನದಿಂದ ಇದ್ದ ಎನ್ನಲಾಗಿದೆ. ಜಯಶ್ರೀ ಯನ್ನು ಜ.17 ರಂದು ಮನೆಯಲ್ಲಿದ್ದಾಗ ಯಾರೋ ಅಪರಿಚಿತರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗಿದ್ದ ಜಯಶ್ರೀಯನ್ನು ಯಾವುದೋ ಆಯುಧದಿಂದ ತಿವಿದು ಕೊಲೆ ಮಾಡಿದ್ದು, ಈ ಕೃತ್ಯವನ್ನು ಸದ್ರಿ ಉಮೇಶನೇ ಮಾಡಿರುವ ಸಾಧ್ಯತೆ ಇರುವುದಾಗಿ ಸಂಶಯ ಇರುತ್ತದೆ. ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *