ಸಮಗ್ರ ನ್ಯೂಸ್: ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದ್ದಾರೆ.
ಕಲಬುರಗಿ ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.