ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಸ್ಪೋಟ; ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ ಜ.18ರಂದು ಮಧ್ಯಾಹ್ನ ನಡೆದಿದೆ.

Ad Widget ... ..

ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Ad Widget

ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *