Ad Widget .

ಇಂದು(ಜ.19) ರಾಜ್ಯಕ್ಕೆ ಪ್ರಧಾನಿ ಮೋದಿ; ಹಲವು ಕಾರ್ಯಕ್ರಮಗಳಿಗೆ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು.

Ad Widget . Ad Widget .

ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌

Ad Widget . Ad Widget .

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವರು ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು. 51,000 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ ಮತ್ತು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

Leave a Comment

Your email address will not be published. Required fields are marked *