Ad Widget .

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಮನೆಯಿಂದ
ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ‌ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ.

Ad Widget . Ad Widget .

ಇಲ್ಲಿನ‌ ಸಮೀಪದ‌ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು.

Ad Widget . Ad Widget .

ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಮನೆಯವರು ‍ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಿಸಿದ್ದಾರೆ. ಸಾವಿನ ಕುರಿತು ಪೋಲೀಸ್ ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *