Ad Widget .

ಒಂಟಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಮೂವರು ಸಹೋದರಿಯರು

ಸಮಗ್ರ ನ್ಯೂಸ್: ಒಂಟಿ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Ad Widget . Ad Widget .

ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ. ಈ ವಿಷಯ ಗುರುವಾರ (ಜ.19) ಬೆಳಕಿಗೆ ಬಂದಿದೆ. ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು.

Ad Widget . Ad Widget .

ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಇವರು ಒಳಗಾಗಿದ್ದರು ಎನ್ನಲಾಗಿದೆ. ಕಿಬ್ಬನಹಳ್ಳಿ ಬಳಿಯ ಗಾರ್ಮೆಂಟ್ಸ್‌ನಲ್ಲಿ ಇಬ್ಬರು ಸಹೋದರಿಯರು ಕೆಲಸ ಮಾಡುತ್ತಿದ್ದರು. 9 ದಿನಗಳ ಹಿಂದೆ ಒಂಟಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ವಾಸನೆ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *