Ad Widget .

ತುಮಕೂರು: ಇಂದು (ಜ.21) ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯಸ್ಮರಣೆ

ಸಮಗ್ರ ನ್ಯೂಸ್: ತುಮಕೂರು ಸಿದ್ದಗಂಗಾ ಮಠದ ದಿ. ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ.

Ad Widget . Ad Widget .

ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ.

Ad Widget . Ad Widget .

ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಪುಣ್ಯಸ್ಮರಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ.

Leave a Comment

Your email address will not be published. Required fields are marked *