Ad Widget .

ಜೆಡಿಎಸ್ ಗೆ ಬಿಗ್ ಶಾಕ್| ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (54) ಹೃದಯಾಘಾತದಿಂದ ಶನಿವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.

Ad Widget . Ad Widget .

ಕಳೆದ ರಾತ್ರಿ‌ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರ ಪ್ರಕಟಿಸಿದ್ದಾರೆ.

Ad Widget . Ad Widget .

ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಇವರು ಶನಿವಾರ ಭಾಗಿಯಾಗಿದ್ದರು. ಬಳಿಕ ರಾತ್ರಿ ಸಂಬಂಧಿಕರೊಬ್ಬರ ಮನೆಗೆ ಹೋದಾಗ, ಕುಡಿಯಲು ನೀರು ಕೇಳುತ್ತಲೇ ತಲೆಸುತ್ತಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದಾಗ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಶಿವಾನಂದ ‌ಪಾಟೀಲ್ ಸೋಮಜಾಳ ಅಗಲಿದ್ದಾರೆ.

Leave a Comment

Your email address will not be published. Required fields are marked *