Ad Widget .

ಪ್ರತಿಭಟನೆ ವೇಳೆ ಸಾವನ್ನಪ್ಪಿದ ಅಂಗನವಾಡಿ ಸಹಾಯಕಿ| ಸರ್ಕಾರಕ್ಕೆ ಛೀಮಾರಿ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget . Ad Widget .

ಮೃತ‌ ಮಹಿಳೆಯನ್ನು ನೀಲಮ್ಮ ದಾನಪ್ಪಗೌಡ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಪ್ರತಿಭಟನೆ ಬಳಿಕ ಊರಿಗೆ ಮರಳಿದ್ದ ಶಿವಮೊಗ್ಗ ಮೂಲದ ಅಂಗನವಾಡಿ ಸಹಾಯಕಿ ಸಾವನ್ನಪ್ಪಿದ್ದಾರೆ.

Ad Widget . Ad Widget .

ಈ ಕುರಿತು ಸರ್ಕಾರದ ವಿರುದ್ದ ಹರಿಹಾಯ್ದ‌ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ. ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ, ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು ಆಲಿಸುವ ಸೌಜನ್ಯವಾದರೂ ರಾಜ್ಯ ಸರ್ಕಾರಕ್ಕೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ ಪ್ರತಿಭಟನಾನಿರತ ಮೇಲೆ ಬಲಪ್ರಯೋಗ ಮಾಡುವುದು, ಬಂಧಿಸುವುದು ರಾಜ್ಯ ಸರ್ಕಾರದ ದಾರ್ಷ್ಟ್ಯವನ್ನು ತೋರುತ್ತದೆ. “ಆರುವ ಮೊದಲು ದೀಪ ಜೋರಾಗಿ ಉರಿಯುತ್ತದೆಯಂತೆ, ಬಿಜೆಪಿ ಸರ್ಕಾರವೂ ಹಾಗೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Comment

Your email address will not be published. Required fields are marked *