ಸುಳ್ಯ: ಔಷಧಿಗೆಂದು ಆಸ್ಪತ್ರೆಗೆ ಹೋದ ಮಹಿಳೆ ನಾಪತ್ತೆ

ಸಮಗ್ರ ನ್ಯೂಸ್: ಔಷಧಿ ತರಲು ಆಸ್ಪತ್ರೆಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿರು ಬಗ್ಗೆ ಸುಳ್ಯ ತಾಲೂಕು ಮರ್ಕಂಜ ಗ್ರಾಮದಿಂದ ವರದಿಯಾಗಿದೆ.

Ad Widget ... ..

ಮರ್ಕಂಜದ ರಾಜಶೇಖರ ಎಂಬವರ ಪತ್ನಿ ನವ ವಿವಾಹಿತೆ ಕೀರ್ತಿಶ್ರೀ (26) ನಾಪತ್ತೆಯಾದವರು. ಇವರು ಜ.
21ರಂದು ಎಲಿಮಲೆಯಲ್ಲಿರುವ ಆಸ್ಪತ್ರೆ ಔಷಧಿಗೆ ಹೋದವರು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ.

Ad Widget

ಆರೋಗ್ಯ ಸರಿ ಇಲ್ಲವೆಂದು ನನ್ನ ಪತ್ನಿ ನನ್ನ ಬಳಿ ಹೇಳಿದ್ದು ನಾನು ಆಕೆಯನ್ನು ಆಸ್ಪತ್ರೆಗೆ ಹೋಗಲೆಂದು ನನ್ನ ಮನೆಯಿಂದ ನನ್ನ ಜೀಪಿನಲ್ಲಿ ಬೆಳಿಗ್ಗೆ 10 ಗಂಟೆಗೆ
ಕರೆದುಕೊಂಡು ಹೋಗಿದ್ದು ಬಳಿಕ ಎಲಿಮಲೆಯ ಕ್ಲಿನಿಕ್ ಗೆ ಹೋಗಲೆಂದು ಆಕೆಯನ್ನು ಬಸ್ಸಿನಲ್ಲಿ ಹತ್ತಿಸಿದ್ದು,10.30 ಕ್ಕೆ ಅವಳ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ನಾನು ಆಕೆಯ ತಾಯಿಯ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿಗೂ ಕೂಡ ಆಕೆ ಬಂದಿರುವುದಿಲ್ಲ ಎಂಬ ವಿಷಯವನ್ನು ಅವರ ತಾಯಿ ತಿಳಿಸಿರುತ್ತಾರೆ. ನಂತರ ನಮಗೆ ತಿಳಿದಿರುವ ಎಲ್ಲಾ ಕಡೆಗಳಲ್ಲಿ ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ಕೂಡ ವಿಚಾರಿಸಿದಾಗ ಯಾವುದೇ ಮಾಹಿತಿ ಲಭಿಸಿರುವುದಿಲ್ಲ. ಆದುದರಿಂದ ತಾವುಗಳು ಕಾಣೆಯಾಗಿರುವ ನನ್ನ ಪತ್ನಿಯನ್ನು ಪತ್ತೆಹಚ್ಚಿ ಕೊಡಬೇಕೆಂದು ಸುಳ್ಯ ಪೊಲೀಸ್ ಠಾಣೆಗೆ ಪತಿ ರಾಜಶೇಖರ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *