ಕಡಬ: ಕುಮಾರಧಾರಾ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆ‌ ಸಾವು

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ‌‌ಕಡಬ ತಾಲೂಕಿನ ಕೊಯಿಲ‌ ಎಂಬಲ್ಲಿ ನಡೆದಿದೆ. ಇಲ್ಲಿನ ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತ ಮಹಿಳೆ.

Ad Widget ... ..

ಇವರು ಕುಮಾರಧಾರ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಾ ನದಿಯ ಮದ್ಯ ಭಾಗಕ್ಕೆ ಬಂದಾಗ ಜೊರಾದ ಗಾಳಿ ಬೀಸಿದ್ದು ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ.

Ad Widget

ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಹುಲ್ಲು ತುಂಬಿದ್ದ ಗೋಣಿ ಚೀಲದ ಸಹಾಯದಿಂದ ಈಜಿ ದಡ ಸೇರಿದ್ದಾರೆ. ಆದರೆ ಗೀತಾ ನೀರಿನಲ್ಲಿ ಮುಳುಗಿದ್ದಾರೆ . ವಿಷಯ ತಿಳಿದು ನೀರಿಗಿಳಿದ ಸ್ಥಳಿಯರಾದ ರಾಮಕೃಷ್ಣ, ನೇತ್ರಾಕ್ಷ ಮತ್ತಿತರರು ಹುಡುಕಾಡಿದಾಗ ಅದಾಗಲೇ ಮೃತಪಟ್ಟಿದ್ದರು.

ಕಡಬ‌ಠಾಣಾ ಎ.ಎಸ್ ಐ ಶಿವರಾಮ, ಕಾನ್ಸ್ ಟೇಬಲ್ ಚಂದನ್ ಸ್ಥಳಕ್ಕಾಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಇಬ್ಬರು ಪುತ್ರರು ಹಾಗು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *