Ad Widget .

ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವು

ಸಮಗ್ರ ನ್ಯೂಸ್: ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್​ ಶಾಕ್​ಗೆ ಒಳಗಾಗಿ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ‌ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.

Ad Widget . Ad Widget .

ಮೃತ ವ್ಯಕ್ತಿಯನ್ನು ಗೌತಮ್(32) ಎಂದು ಗುರುತಿಸಲಾಗಿದೆ. ಜ.23ರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಟ್ರಾನ್ಸ್‌ಫಾರ್ಮರ್ ದುರಸ್ಥಿ ವೇಳೆ ಕರೆಂಟ್​ ಶಾಕ್​ಗೆ ಒಳಗಾಗಿ ವಿದ್ಯುತ್ ಕಂಬದಿಂದ ಕೆಳಕ್ಕೆ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಣೆಗೆ ಬಂದು, ಆತನನ್ನು ಸುಗುಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗೌತಮ್ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ಮರಣೋತ್ತರ ಪರೀಕ್ಷೆಗಾಗಿ ಗೌತಮ್​ ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆ ಶಿಫ್ಟ್ ಮಾಡಲಾಗಿದೆ. ಕುಟುಂಬಕ್ಕೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡಿದ್ದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಸಂಬಂಧ ಮೃತ ಗೌತಮ್ ತಂದೆ ರಂಗಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಮಗನ ಸಾವಿಗೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣ. ಅಧಿಕಾರಿಗಳೇ ನನ್ನ ಮಗನನ್ನ ಕೊಲೆ ಮಾಡಿದ್ದಾರೆ. ಹೀಗಾಗಿ ಮಗನ ಸಾವಿಗೆ ಕಾರಣರಾದವರ ಮೇಲೆ ಕ್ರಮಗೊಳ್ಳಬೇಕು ಎಂದು ಕೆ.ಇ.ಬಿ ಇಂಜಿನಿಯರ್ ಹಾಗೂ ಎಇ ವಿರುದ್ದ ದೂರು ದಾಖಲು ಮಾಡಿದ್ದಾರೆ.

Leave a Comment

Your email address will not be published. Required fields are marked *