19 ವರ್ಷದ ಪಾಕಿಸ್ತಾನಿ ಯುವತಿ ಬೆಂಗಳೂರಿನಲ್ಲಿ ಬಂಧನ

ಸಮಗ್ರ ನ್ಯೂಸ್: ಭಾರತದಲ್ಲಿ ಅಕ್ರಮವಾಗಿ ನೆಲೆಸಲು ತನ್ನ ಗುರುತನ್ನು ನಕಲಿ ಮಾಡಿದ್ದ 19 ವರ್ಷದ ಪಾಕಿಸ್ತಾನಿ ಯುವತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

. Ad Widget . Ad Widget

ಇಕ್ರಾ ಜೀವನಿ ಎಂಬಾಕೆಯನ್ನು ಬಂಧಿಸಿರುವ ಪೊಲೀಸರು, ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಗೆ (ಎಫ್‌ಆರ್‌ಆರ್‌ಒ) ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಸದ್ಯ ಇಕ್ರಾ ಅವರನ್ನು ಮಹಿಳಾ ಪುನರ್ವಸತಿ ಕೇಂದ್ರದಲ್ಲಿರಿಸಲಾಗಿದೆ.

. Ad Widget . . Ad Widget . Ad Widget

ಪಾಕಿಸ್ತಾನದ ನಿವಾಸಿ ಇಕ್ರಾ, ಕೆಲ ತಿಂಗಳ ಹಿಂದೆ ಡೇಟಿಂಗ್ ಆ್ಯಪ್‌ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್ (25) ಅವರನ್ನು ಪರಿಚಯ ಮಾಡಿ ಕೊಂಡಿದ್ದರು. ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. 2022ರಲ್ಲಿ ನೇಪಾಳದ ಗಡಿ ಮೂಲಕ ದೇಶದೊಳಗೆ ನುಸುಳಿದ್ದ ಇಕ್ರಾ, ಮುಲಾಯಂಸಿಂಗ್ ಅವರನ್ನು ಮದುವೆಯಾಗಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

25 ವರ್ಷದ ಭದ್ರತಾ ಸಿಬ್ಬಂದಿ ಮುಲಾಯಂ ಸಿಂಗ್ ಯಾದವ್ ನನ್ನು ಕೂಡ ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *