ಕರ್ತವ್ಯದ ವೇಳೆಯಲ್ಲಿ ಹೃದಯಾಘಾತ| ಉಪನ್ಯಾಸಕಿ ಸಾವು

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ 27 ವರ್ಷದ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಅನುಷಾ ಶೆಟ್ಟಿ (27) ಹೃದಯಾಘಾತದಿಂದ ಮೃತಪಟ್ಟ ಯುವತಿ. ಈಕೆ ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

Ad Widget ... ..

ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಕರ್ತವ್ಯ ನಿರತ ವೇಳೆಯಲ್ಲಿಯೇ ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *